ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದು..? ➤ ಕುತೂಹಲ ಮೂಡಿಸಿದೆ ಶಿಕ್ಷಣ ಸಚಿವರ ನಾಳೆಯ ಸುದ್ದಿಗೋಷ್ಟಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.03. ಕೊರೋನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸಿಬಿಎಸ್‌ಇ ಮಂಡಳಿ ಈಗಾಗಲೇ ಎಸ್ಸೆಸ್ಸೆಲ್ಸಿ ಮತ್ತು 12 ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದ್ದು, ರಾಜ್ಯದಲ್ಲಿಯೂ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ರದ್ದತಿಯ ಬಗ್ಗೆ ನಾಳೆ ಸ್ಪಷ್ಟವಾದ ನಿರ್ಧಾರ ಹೊರಬರಲಿದೆ.

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ನಾಳೆ (ಜೂ.04) ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಲಿದ್ದು, ಶಿಕ್ಷಣ ಸಚಿವರು ನಾಳೆ ನಡೆಸಲಿರುವ ಸುದ್ದಿಗೋಷ್ಠಿ ಭಾರೀ ಕುತೂಹಲ ಮೂಡಿಸಿದೆ. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗುವುದೇ? ಅಥವಾ ರದ್ದು ಮಾಡಲಾಗುವುದೇ ಎಂಬುದರ ಬಗ್ಗೆ ನಾಳೆ ಅಂತಿಮ ನಿರ್ಧಾರ ಹೊರಬೀಳಲಿದೆ.

Also Read  ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ‌ ಕಿರುಕುಳ ➤ ಆರೋಪಿ ವಕೀಲ ಅರೆಸ್ಟ್..!

 

 

 

error: Content is protected !!
Scroll to Top