ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರ ➤ ಸಹಾಯಧನ ಘೋಷಿಸಿದ ಸರಕಾರ

(ನ್ಯೂಸ್ ಕಡಬ) newskadaba.com ಗೋವಾ, ಜೂ.03. ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಗೋವಾ ಸರಕಾರವು 2 ಲಕ್ಷ ರೂ. ಸಹಾಯಧನ ನೀಡಲಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದ್ದಾರೆ.

ಗುರುವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಸಹಾಯಧನ ನೀಡಲಾಗುವುದು. ಇದರೊಂದಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಪರಿಹಾರ ಕೂಡಾ ಲಭಿಸಲಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದ ಜನತೆಗೆ ತಲುಪಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದವರು ತಿಳಿಸಿದ್ದಾರೆ.

Also Read  74ನೇ ಸ್ವಾತಂತ್ರ್ಯ ದಿನಾಚರಣೆ ➤ ಜನತೆಗೆ ಶುಭಾಶಯ ಕೋರಿದ ಸಿಎಂ ಬಿ.ಎಸ್.ಯಡಿಯೂರಪ್ಪ

 

 

 

error: Content is protected !!
Scroll to Top