ಡಿ.ಕೆ. ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ



(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.04. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾದ ಘಟನೆ ಶುಕ್ರವಾರ ಸಂಜೆ ಬೆಂಗಳೂರಿನ ನೆಲಮಂಗಲ ಸಮೀಪ ನಡೆದಿದೆ.





ಹಿರಿಯ ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆಯಲ್ಲಿ ಆಯೋಜಿಸಿದ್ದ ಕೋವಿಡ್ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡು ವಾಪಾಸಾಗುತ್ತಿದ್ದ ವೇಳೆ ವಿಪರೀತ ಮಳೆಯ ಹಿನ್ನೆಲೆಯಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಇವರಿದ್ದ ಹೆಲಿಕಾಪ್ಟರ್ ನೆಲಮಂಗಲದ ಟಿ. ಬೇಗೂರು ಬಳಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶವಾಗಿದೆ. ಹೆಲಿಕಾಪ್ಟರ್ ನಲ್ಲಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್ ಹಾಗೂ ಎಂಎಲ್ಸಿ ಯು.ಬಿ. ವೆಂಕಟೇಶ್ ಅವರಿದ್ದು, ಅಪಾಯದಿಂದ ಪಾರಾಗಿದ್ದಾರೆ.






 

 

error: Content is protected !!
Scroll to Top