(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05: ರಾಜ್ಯದಲ್ಲಿ ಈವರೆಗೆ 1,784 ಕಪ್ಪು ಶಿಲೀಂಧ್ರ ಪ್ರಕರಣ ಕಂಡುಬಂದಿದ್ದು, 62 ಮಂದಿ ಗುಣಮುಖರಾಗಿದ್ದಾರೆ.ಇದರಲ್ಲಿ 1,564 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬ ಸೋಂಕಿತನಿಗೆ ಕನಿಷ್ಠ 2-3 ವಾರ ಚಿಕಿತ್ಸೆ ಬೇಕಾಗುತ್ತದೆ. ಸಂಪೂರ್ಣ ಗುಣಮುಖರಾಗಲು 5-6 ವಾರಗಳ ಕಾಲ ಚಿಕಿತ್ಸೆ ನೀಡಬೇಕಾಗುತ್ತದೆ. ಆದರೆ ದುರದೃಷ್ಟ 111 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಮಧ್ಯಮ ವರ್ಗದವರು, ಬಡವರ್ಗದವರು ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದು, ಎಲ್ಲರಿಗೂ ಕಪ್ಪು ಶಿಲೀಂಧ್ರಕ್ಕೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳು ಹಿಂದೆಯೇ ಸಂಪೂರ್ಣ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಘೋಷಿಸಿದ್ದಾರೆ ಎಂದು ತಿಳಿಸಿದ್ದಾರೆ.