(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.05: ಕೊರೋನಾ ನಿರೀಕ್ಷಿತ ಮಟ್ಟದಲ್ಲಿ ಕಡಿಮೆ ಆಗದ ಕಾರಣ ಜೂ. 3ರಂದು ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಿ ಘೋಷಣೆ ಮಾಡಲಾಗಿತ್ತು.
ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಾಕ್‌ಡೌನ್ ಸಡಿಲಿಕೆ ಕುರಿತು ಸುಳಿವು ಕೊಟ್ಟಿದ್ದಾರೆ. ಸೋಮವಾರದಿಂದ ಲಾಕ್‌ಡೌನ್ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.ಇನ್ನು ಮೂರ್ನಾಲ್ಕು ದಿನ ರಾಜ್ಯದ ಪರಿಸ್ಥಿತಿಯನ್ನು ವಿಶ್ಲೇಷಿಸುತ್ತೇವೆ. ಯಾವ್ಯಾವ ಜಿಲ್ಲೆಗಳಲ್ಲಿ ಪರಿಸ್ಥಿತಿ ಹೇಗಿದೆ ಎಂಬುದನ್ನು ಗಮನಿಸುತ್ತೇವೆ. ನಂತರ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.