(ನ್ಯೂಸ್ ಕಡಬ) Newskadaba.com ಪುತ್ತೂರು, ಜೂ. 05. ರಾಜ್ಯದಲ್ಲಿ ವಿದ್ಯಾರ್ಥಿಗಳು ವಿವಿಧ ಕಾಲೇಜುಗಳಿಂದ ವರ್ಷಾನುವರ್ಷ ಬಹುದೊಡ್ಡ ಸಂಖ್ಯೆಯಲ್ಲಿ ಅರೆವೈದ್ಯಕೀಯ ಪದವಿಯನ್ನು ಪಡೆದು ತೇರ್ಗಡೆಯಾಗುತ್ತಾರೆ. ಆದರೆ, ಸರಕಾರದಿಂದ ಅಂಗೀಕೃತವಾದ ಅಧಿಕೃತ ಅರೆವೈದ್ಯಕೀಯ ಮಂಡಳಿ ಇಲ್ಲದ ಕಾರಣ ವಿದ್ಯಾರ್ಥಿಗಳು ಕೆಲಸಕ್ಕಾಗಿ ಪರದಾಡುವಂತಾಗಿದೆ. ತಕ್ಷಣ ರಾಜ್ಯ ಸರಕಾರವು ವಿದ್ಯಾರ್ಥಿಗಳಿಗೆ, ಪದವೀಧರರಿಗೆ ಆಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಸರಕಾರದ ಅಧೀನದಲ್ಲಿ ಅರೆವೈದ್ಯಕೀಯ ಮಂಡಳಿ ಸ್ಥಾಪಿಸಬೇಕೆಂದು ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಅಪರ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಮುಸ್ತಫಾ ಕೊಡಿಪ್ಪಾಡಿ, ಜಿಲ್ಲಾ ಸಮಿತಿ ಸದಸ್ಯರಾದ ಶಮ್ಮಾಶ್ ಬನ್ನೂರು, ರಫೀಕ್ ಕೆಮ್ಮಾಯಿ ಮೊದಲಾದವರು ಉಪಸ್ಥಿತರಿದ್ದರು.