BREAKING: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ..? ➤ ಅಡ್ಡಗೋಡೆ ಮೇಲೆ ದೀಪವಿಟ್ಟ ಸಿಎಂ ಹೇಳಿಕೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.06. ಕಳೆದ ಹಲವು ಸಮಯಗಳಿಂದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಯು ಮತ್ತೆ ಮುನ್ನೆಲೆಗೆ ಬಂದಿದ್ದು, ಅದಕ್ಕೆ ಪುಷ್ಟಿ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಅಡ್ಡ ಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿಕೆ ನೀಡಿದ್ದಾರೆ.

ಇದುವರೆಗೆ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಅಲ್ಲಗಳೆಯುತ್ತಿದ್ದ ಯಡಿಯೂರಪ್ಪನವರು ಇಂದು ಮೌನ ಮುರಿದಿದ್ದು, ನನಗೆ ಸಿಎಂ ಸ್ಥಾನ ನೀಡಿರುವುದು ಸಂಘಟನೆ. ಹೈಕಮಾಂಡ್ ಗೆ ನನ್ನ ಬಗ್ಗೆ ಎಲ್ಲಿಯವರೆಗೆ ವಿಶ್ವಾಸವಿರುತ್ತದೆಯೋ ಅಲ್ಲಿಯವರೆಗೆ ಸಿಎಂ ಸ್ಥಾನದಲ್ಲಿರುತ್ತೇನೆ. ಹೈಕಮಾಂಡ್ ಸೂಚಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ. ಇದೀಗ ಅವರ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವನ್ನೇ ಮೂಡಿಸಿದೆ. ಯಡಿಯೂರಪ್ಪ ಪರ – ವಿರೋಧಿ ಬಣದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ.

Also Read  ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ➤ ಫೋಕ್ಸೋ ಕಾಯ್ದೆಯಡಿ ಮುರುಘಾ ಶ್ರೀ ಬಂಧನ

ಎರಡು ದಿನಗಳ ಹಿಂದೆ ಯಡಿಯೂರಪ್ಪರವರ ಪುತ್ರ ಬಿ‌.ವೈ.ವಿಜಯೇಂದ್ರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರವರನ್ನು ಭೇಟಿಯಾಗಿ ಚರ್ಚಿಸಿದ್ದು, ಈ ವೇಳೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.

 

 

 

error: Content is protected !!
Scroll to Top