(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.06: ಸದ್ಯಕ್ಕೆ 18 ವರ್ಷ ಮೇಲ್ಪಟ್ಟ ಆದ್ಯತಾ ಗುಂಪಿನವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಅತೀ ಶೀಘ್ರದಲ್ಲೇ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ದಿನಸಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ತಲಾ 5 ಸಾವಿರ ರೂಪಾಯಿ ಸಹಾಯಧನ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕೊರೊನಾ ವಾರಿಯರ್ಸ್ ಆಗಿ ದುಡಿಯುತ್ತಿರುವ ಹಾಗೂ ಹಾಲಿ ಸರಕಾರ ಗುರುತಿಸಿರುವ ವಿವಿಧ ಆದ್ಯತಾ ವಲಯಗಳಲ್ಲಿನ 18 ರಿಂದ 44 ವರ್ಷದವರಿಗೆ ಲಸಿಕೆ ನೀಡಲಾಗುತ್ತಿದೆ. ಈ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಅತೀ ಶೀಘ್ರದಲ್ಲೇ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದರು.