ಬಾಲಿವುಡ್ ನಟ ದಿಲೀಪ್ ಕುಮಾರ್​​​ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba, ಮುಂಬೈ ಜೂ.06: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಉಸಿರಾಟದ ಸಮಸ್ಯೆಯಿಂದ ಭಾನುವಾರ ಬೆಳಗ್ಗೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಈ ಕುರಿತು ದಿಲೀಪ್ ಕುಮಾರ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಅವರ ಮ್ಯಾನೇಜರ್ ಮಾಹಿತಿ ನೀಡಿದ್ದು, ನಟನ ಆರೋಗ್ಯದ ಸ್ಥಿತಿಗತಿ ಕುರಿತು ತಿಳಿಸಿದ್ದಾರೆ. ದಿಲೀಪ್ ಅವರು ನಿಯಮಿತ ವೈದ್ಯಕೀಯ ಪರೀಕ್ಷೆಗೆಂದು ಖಾರ್‍ನ ನಾನ್ ಕೋವಿಡ್ ಪಿಡಿ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವೇಳೆ ಅವರಿಗೆ ಉಸಿರಾಟದ ಸಮಸ್ಯೆ ಇರುವುದು ಪತ್ತೆಯಾಗಿದೆ. ಡಾ.ನಿತಿನ್ ಗೋಖಲೆ ಅವರನ್ನೊಳಗೊಂಡ ವೈದ್ಯಕೀಯ ತಂಡ ನಟನ ಆರೋಗ್ಯವನ್ನು ನೋಡಿಕೊಳ್ಳುತ್ತಿದ್ದು, ದಿಲೀಪ್ ಅವರಿಗಾಗಿ ಪ್ರಾರ್ಥಿಸಿ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

Also Read  ನಾಲ್ಕೂರು: ಬೈಕ್ ಮತ್ತು ಕಾರು ನಡುವೆ ಪರಸ್ಪರ ಢಿಕ್ಕಿ

 

error: Content is protected !!
Scroll to Top