ಕಡಬ: ಕೊರೋನಾ ಸೋಂಕಿಗೆ ತುತ್ತಾಗಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.07. ಕಡಬ ತಾಲೂಕಿನ ಮತ್ತೋರ್ವ ಮಹಿಳೆ ಕೊರೋನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಮೃತರ ಸಂಖ್ಯೆ ಹನ್ನೊಂದಕ್ಕೆ ಏರಿಕೆಯಾಗಿದೆ.

ಕಡಬ ತಾಲೂಕಿನ ಕೊಯಿಲ ಗ್ರಾಮದ ನೀಲಮೆ ಎಂಬಲ್ಲಿಯ ಮಹಿಳೆಯೊಬ್ಬರು ಅನಾರೋಗ್ಯದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದರು. ಅಲ್ಲಿ ಕೋವಿಡ್ ತಪಾಸಣೆ ನಡೆಸಿದ ವೇಳೆ ಪಾಸಿಟಿವ್ ಬಂದಿತ್ತು. ಮೇ 31ರಂದು ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದರು ಎನ್ನಲಾಗಿದೆ. ಶನಿವಾರ ತಡರಾತ್ರಿ ಇವರ ಆರೋಗ್ಯದಲ್ಲಿ ಏರುಪೇರು ಕಂಡುಬಂದು ಮೃತಪಟ್ಟಿದ್ದಾರೆ‌ ಎಂದು ತಿಳಿದುಬಂದಿದೆ.

 

 

 

Scroll to Top