ಸಿಎಂ ಯಡಿಯೂರಪ್ಪರ ರಾಜೀನಾಮೆ ವಿಚಾರ ➤ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾದರೂ ಏನು..?

Nalin Kumar kateel

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.07. ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವನ್ನು ಮೂಡಿಸಿರುವ ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪರ ‘ನನಗೆ ಸಿಎಂ ಸ್ಥಾನ ನೀಡಿರುವುದು ಸಂಘಟನೆ. ಹೈಕಮಾಂಡ್ ಗೆ ನನ್ನ ಬಗ್ಗೆ ಎಲ್ಲಿಯವರೆಗೆ ವಿಶ್ವಾಸವಿರುತ್ತದೆಯೋ ಅಲ್ಲಿಯವರೆಗೆ ಸಿಎಂ ಸ್ಥಾನದಲ್ಲಿರುತ್ತೇನೆ. ಹೈಕಮಾಂಡ್ ಸೂಚಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುವ ಹೇಳಿಕೆಯ ಬಗ್ಗೆ ಇದೀಗ ಚರ್ಚೆ ಶುರುವಾಗಿದೆ.

ಈ ಬಗ್ಗೆ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಯಡಿಯೂರಪ್ಪ ಅವರು ನಮ್ಮ ಆದರ್ಶ ನಾಯಕ. ರಾಷ್ಟ್ರ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಅವರು ಹೇಳಿರುವುದು ತನ್ನ ನಿಷ್ಠೆಯನ್ನು ತೋರಿಸುತ್ತದೆ. ಪಕ್ಷ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದಿರುವ ಅವರು ಅಧಿಕಾರಕ್ಕೆ ಅಂಟಿ ಕೂತವರಲ್ಲ ಎಂದು ಇದರಿಂದ ತಿಳಿಯುತ್ತದೆ. ಸದ್ಯಕ್ಕೆ ಪಕ್ಷದಲ್ಲಿ ಯಾವುದೇ ನಾಯಕತ್ವ ಬದಲಾವಣೆಯ ಚರ್ಚೆಗಳಿಲ್ಲ. ಯಡಿಯೂರಪ್ಪರೇ ನಮ್ಮೆಲ್ಲರ ಒಮ್ಮತದ ಮುಖ್ಯಮಂತ್ರಿ ಎಂದು ಸ್ಪಷ್ಟನೆ ನೀಡಿದ್ದಾರೆ.

Also Read  ಅನಗತ್ಯ ತಿರುಗಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ಎಸಿ ಯತೀಶ್ ಉಳ್ಳಾಲ್ ಎಚ್ಚರಿಕೆ

 

 

 

error: Content is protected !!
Scroll to Top