ಮರಕ್ಕೆ ಢಿಕ್ಕಿ ಹೊಡೆದ ಅಂಬ್ಯುಲೆನ್ಸ್ ➤ ಮೂವರು ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಕಣ್ಣೂರು, ಜೂ.07. ಆಂಬ್ಯುಲೆನ್ಸ್ ವೊಂದು ರಸ್ತೆಯ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ಕೇರಳ ರಾಜ್ಯದ ಕಣ್ಣೂರಿನಲ್ಲಿ ನಡೆದಿದೆ.

ಮೃತರನ್ನು ಪಯ್ಯನ್ನೂರು ನಿವಾಸಿಗಳಾದ ಬಿಜೋ (45) ಆತನ ಸಹೋದರಿ ರಜಿನಾ (37) ಮತ್ತು ಆಂಬ್ಯುಲೆನ್ಸ್ ಚಾಲಕ ನಿತಿನ್ ರಾಜ್ (40) ಎಂದು ಗುರುತಿಸಲಾಗಿದೆ. ಬೆನ್ನಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಕಣ್ಣೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಕಣ್ಣೂರು ಸಮೀಪದ ಮುಂಡಾಯದ್ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಚಾಲಕ ನಿದ್ದೆಯ ಮಂಪರಿನಲ್ಲಿ‌ದ್ದುದೇ ಘಟನೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.

Also Read  ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ ► ಪ್ರವಾಹದಿಂದ ತತ್ತರಿಸಿರುವ ಉತ್ತರ ಭಾರತದ ಜನತೆಗೆ ಮತ್ತೊಂದು ಆಘಾತ

 

 

 

error: Content is protected !!
Scroll to Top