ದೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತು ➤ ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಉಚಿತ ವ್ಯಾಕ್ಸಿನ್

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.07. ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಇದುವರೆಗೆ ದೇಶದ 23 ಕೋಟಿ ಜನತೆಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ.

ಅವರು ಸೋಮವಾರ ಸಂಜೆ ದೇಶವನ್ನುದ್ದೇಶಿಸಿ ಮಾತನಾಡಿ, ದೇಶಾದ್ಯಂತ ವ್ಯಾಕ್ಸಿನ್ ವಿತರಣೆಗೆ ‘ಮಿಷನ್ ಇಂದ್ರಧನುಷ್’ ಆರಂಭಿಸಲಾಗಿದೆ. ಇನ್ನು ಮುಂದೆ ಕೇಂದ್ರ ಸರಕಾರವೇ ರಾಜ್ಯಗಳಿಗೆ ಉಚಿತವಾಗಿ ಕೊರೋನಾ ಲಸಿಕೆಯನ್ನು ಪೂರೈಸಲಿದ್ದು, ಮುಂದಿನ 2 ವಾರಗಳ ಬಳಿಕ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ನೀಡಲಿದೆ. ದೇಶದ ಬಡವರು ಉಪವಾಸದಿಂದ ಮಲಗಬಾರದು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ದೀಪಾವಳಿಯ ತನಕ ದೇಶದ 80 ಕೋಟಿ ಬಡ ನಾಗರಿಕರಿಗೆ ಉಚಿತ ಆಹಾರ ಧಾನ್ಯ ನೀಡಲಾಗುವುದು ಎಂದವರು ತಿಳಿಸಿದ್ದಾರೆ. ದೇಶಾದ್ಯಂತ ಲಸಿಕೆ ನೀಡಿಕೆ ವೇಗವಾಗಿ ನಡೆಯುತ್ತಿದ್ದು, ದೇಶದ ಪ್ರತಿಯೊಬ್ಬರಿಗೂ ಲಸಿಕೆ ನೀಡಲು ಸರಕಾರ ಪ್ರಯತ್ನಿಸುತ್ತಿದೆ. ದೇಶದ 130 ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡುವುದು ದೊಡ್ಡ ಸವಾಲಾಗಿದೆ ಎಂದವರು ಇದೇ ಸಂದರ್ಭದಲ್ಲಿ ನುಡಿದಿದ್ದಾರೆ‌.

Also Read  ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!!

 

 

 

error: Content is protected !!
Scroll to Top