(ನ್ಯೂಸ್ ಕಡಬ) newskadaba.com ನವದೆಹಲಿ, ಜೂ.07. ಕೊರೋನಾ ವ್ಯಾಕ್ಸಿನ್ ಗೆ ಬೇಕಾಬಿಟ್ಟಿ ದರ ವಸೂಲಿ ಮಾಡುತ್ತಿದ್ದ ಖಾಸಗಿ ಆಸ್ಪತ್ರೆಗಳ ಹಗಲು ದರೋಡೆಗೆ ಮೂಗುದಾರ ಹಾಕಿರುವ ಕೇಂದ್ರ ಸರಕಾರವು ಖಾಸಗಿ ಆಸ್ಪತ್ರೆಗಳಿಗೆ ಪ್ರತ್ಯೇಕ ದರ ನಿಗದಿಪಡಿಸಿದೆ.
ಈ ಬಗ್ಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ಲಭ್ಯವಿರಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ 150 ರೂಪಾಯಿ ಸೇವಾ ಶುಲ್ಕ ಮಾತ್ರ ವಿಧಿಸಲು ದರ ನಿಗದಿಪಡಿಸಲಾಗಿದೆ ಎಂದಿದ್ದಾರೆ. ದೇಶದಲ್ಲಿ ಉತ್ಪಾದಿಸಲಾಗುವ 25% ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳು ನೇರವಾಗಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.