(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.08. ರಾಜ್ಯದಲ್ಲಿ ಕೊರೋನಾ ಹಾವಳಿ ಕಡಿಮೆಯಾಗಿದೆ ಆದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಇನ್ನೂ ಇಳಿಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಜೂನ್ 14 ರ ವರೆಗೆ ಕಟ್ಟುನಿಟ್ಟಿನ ಲಾಕ್‍ಡೌನ್ ನಿಯಮಗಳನ್ನು ಜಾರಿಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50 ಕ್ಕಿಂತ ಹೆಚ್ಚಿನ ಪಾಸಿಟಿವ್ ಪ್ರಕರಣಗಳಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮದುವೆಯಂತಹ ಯಾವುದೇ ಶುಭ ಸಮಾರಂಭಗಳಿಗೂ ಅವಕಾಶವಿಲ್ಲ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರವು ಶೇಕಡಾ 20 ರಷ್ಟಿದ್ದು, ಅದನ್ನು ಶೇಕಡಾ 05ಕ್ಕೆ ಇಳಿಸಲು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.