ನೀವು ಸರಕಾರಿ ಜಾಗದಲ್ಲಿ ಮನೆ ಕಟ್ಟಿದ್ದೀರಾ..? ➤ ಹಾಗಾದರೆ ಈ ಸುದ್ದಿಯನ್ನು ತಪ್ಪದೇ ಓದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.08. ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿದವರಿಗೆ ಸರಕಾರವು ಗುಡ್ ನ್ಯೂಸ್ ನೀಡಿದ್ದು, ಸರಕಾರಿ ಭೂಮಿಯ ಸಕ್ರಮಕ್ಕೆ ಅರ್ಜಿ ಸಲ್ಲಿಕೆಯ ಅವಧಿಯನ್ನು 31 ಮಾರ್ಚ್ 2022 ರವರೆಗೆ ವಿಸ್ತರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

2015 ರ ಜನವರಿ 01 ರ ಮೊದಲು ಮನೆ ನಿರ್ಮಿಸದವರಿಗೆ ಈ ಯೋಜನೆಯು ಅನ್ವಯವಾಗಲಿದ್ದು, ಅನಧಿಕೃತವಾಗಿ ನಿರ್ಮಿಸಿಕೊಂಡ ಮನೆಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. 94 ಸಿ ಹಾಗೂ 94 ಸಿಸಿ ಅನ್ವಯ ಈ ಹಿಂದೆ ಜಾಗದ ಸಕ್ರಮಕ್ಕೆ 2019 ರ ವರೆಗೆ ಅವಕಾಶ ಕಲ್ಪಿಸಲಾಗಿತ್ತು‌.

Also Read  ರಿಪಬ್ಲಿಕ್ ಟಿವಿ ಮುಖ್ಯಸ್ಥ, ಪತ್ರಕರ್ತ ಅರ್ನಬ್ ಗೋಸ್ವಾಮಿ ಅರೆಸ್ಟ್

 

 

 

error: Content is protected !!
Scroll to Top