ರಾಷ್ಟ್ರವನ್ನೇ ತಲ್ಲಣಗೊಳಿಸಿದ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ➤ ಪತ್ನಿ ಸೇರಿ ಮೂವರಿಗೆ ಜೀವಿತಾವಧಿ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba,ಉಡುಪಿ, ಜೂ.08:ಉಡುಪಿಯ ಇಂದ್ರಾಳಿಯ ಎನ್‌ಆರ್‌ಐ ಉದ್ಯಮಿ ಭಾಸ್ಕರ್ ಶೆಟ್ಟಿ (52) ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೃತರ ಪತ್ನಿ ಮತ್ತು ಮಗ ಸೇರಿದಂತೆ ಮೂವರನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳವಾರ (ಜೂನ್ 8) ಅಪರಾಧಿಗಳೆಂದು ತೀರ್ಪು ನೀಡಿದೆ.ಅಲ್ಲದೆ ಮೂವರಿಗೂ ಜೀವಿತಾವಧಿ ಜೈಲು ಶಿಕ್ಷೆ ವಿಧಿಸಲಾಗಿದೆ.

 

ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ನಂದಳಿಕೆ ಮೂಲದ ಜ್ಯೋತಿಷಿ ನಿರಂಜನ್ ಭಟ್ ಅಪರಾಧಿ ಎಂದು ನ್ಯಾಯಾಲಯ ಪರಿಗಣಿಸಿಜೀವಾವಧಿ ಶಿಕ್ಷೆ ವಿಧಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್, ಶಾಂತಾರಾಮ್ ಶೆಟ್ಟಿ, ಪ್ರಾಸಿಕ್ಯೂಷನ್ ಪರವಾಗಿ ಈ ಪ್ರಕರಣದಲ್ಲಿ ವಾದ ಮಂಡಿಸಿದ್ದರು.

Also Read  ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

 

error: Content is protected !!
Scroll to Top