ಬೆಂಗಳೂರು ತಲುಪಿದ 29ನೇ ಆಕ್ಸಿಜನ್ ಎಕ್ಸ್ ಪ್ರೆಸ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.08:29ನೇ ಆಕ್ಸಿಜನ್ ಎಕ್ಸ್ ಪ್ರೆಸ್ ವಿಶೇಷ ರೈಲು ಇಂದು ಬೆಂಗಳೂರಿಗೆ ಆಗಮಿಸಿದೆ. 126.7 ಮೆಟ್ರಿಕ್ ಟನ್ ವೈದ್ಯಕೀಯ ಲಿಕ್ವಿಡ್ ಆಕ್ಸಿಜನ್ ಹೊತ್ತ ಈ ಎಕ್ಸ್ ಪ್ರೆಸ್ ರೈಲು ಬೆಂಗಳೂರಿನ ವೈಟ್ ಫೀಲ್ಡ್ ಕಂಟೈನರ್ ಡಿಪೋ ತಲುಪಿರುವುದಾಗಿ ಪ್ರಸಾರ ಭಾರತಿ ಟ್ವೀಟ್ ಮಾಡಿದೆ.

 

ಇದುವರೆಗೆ ರಾಜಧಾನಿ ಬೆಂಗಳೂರಿಗೆ 29 ರೈಲುಗಳ ಮೂಲಕ 3,340.69 ಟನ್ ದ್ರವ ವೈದ್ಯಕೀಯ ಆಮ್ಲಜನಕ ತರಲಾಗಿದೆ. ಈ ಮೂಲಕ ಕೋವಿಡ್-19 ರೋಗಿಗಳಿಗೆ ಅತ್ಯವಶ್ಯಕವಾದ ಪ್ರಾಣವಾಯು ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.

Also Read  ಶೌಚಾಲಯದಲ್ಲಿ ವಿಡಿಯೋ ಪ್ರಕರಣ- ಯಾವುದೇ ಸಾಕ್ಷ್ಯ ಸಿಕ್ಕಿಲ್ಲ; ಕೋಮುಬಣ್ಣ ಬಳಿಯದಂತೆ ಖುಷ್ಬೂ ಸುಂದರ್‌

 

error: Content is protected !!
Scroll to Top