ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.08: ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿ ಮುಂದುವರೆದಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಾವಾದ 24 ಗಂಟೆಗಳ ಅವಧಿಯಲ್ಲಿ 86,498 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ 62 ದಿನಗಳ ಕನಿಷ್ಠ ಪ್ರಮಾಣವಾಗಿದೆ.

ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,89,96,473ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,51,309ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,03,702ಕ್ಕೆ ಏರಿಕೆಯಾಗಿದೆ. ಇನ್ನು ಭಾರತದಲ್ಲಿ ಒಂದೇ  18,73,485 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 36,82,07,596 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Scroll to Top