ನಾಲ್ಕು ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ದೌರ್ಜನ್ಯ ➤ ಬೆಳ್ತಂಗಡಿಯಲ್ಲಿ ನಡೆಯಿತು ಪೈಶಾಚಿಕ ಕೃತ್ಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.08. ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಬೆಳ್ತಂಗಡಿಯಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿರುವ ಧರ್ಮಸ್ಥಳ ಪೋಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಮನೆ ಸಮೀಪದ ನಾಲ್ಕು ವರ್ಷ ಪ್ರಾಯದ ಬಾಲಕಿಯನ್ನು ಮನೆಗೆ ಕರೆದೊಯ್ದು ಬೆತ್ತಲೆ ಚಿತ್ರಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ತಂದೆ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಕೊರೊನಾಗೆ ಸೆಡ್ಡು ಹೊಡೆಯುತ್ತಿದ್ದಾರೆ ಜನ➤ ದ.ಕ ಜಿಲ್ಲೆಯಲ್ಲಿ ಒಂದೇ ದಿನ 183 ಮಂದಿ ಚೇತರಿಸಿ ಆಸ್ಪತ್ರೆಯಿಂದ ಬಿಡುಗಡೆ

 

 

 

error: Content is protected !!
Scroll to Top