ತರಕಾರಿ ವಾಹನದಲ್ಲಿ ಮದ್ಯ ಸಾಗಾಟ ➤ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.09:ಬೆಂಗಳೂರಿನಿಂದ ತಮಿಳುನಾಡಿಗೆ ತರಕಾರಿ ಸಾಗಿಸುವ ವಾಹನದಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಗರದ ಕೆಆರ್ ಮಾರ್ಕೆಟ್ ನಲ್ಲಿ ನಡೆದಿದೆ.

ಮಂಗಳವಾರ ತಡರಾತ್ರಿ ಪೊಲೀಸರು ತಪಾಸಣೆ ಮಾಡುವ ವೇಳೆ ತರಕಾರಿ ತುಂಬಿದ್ದ ಜೀಪ್ ಕಲಾಸಿಪಾಳ್ಯ ಕಡೆಯಿಂದ ಬರುತ್ತಿತ್ತು. ಇಡೀ ಜೀಪ್ ತುಂಬಾ ಬೇರೆ ಬೇರೆ ರೀತಿಯ ತರಕಾರಿಗಳು ತುಂಬಿದ್ದವು. ವಾಹನ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತರಕಾರಿಗಳ ನಡುವೆ, ಎರಡು ಬಗೆಯ ಬರೋಬ್ಬರಿ ಐನೂರು ಲೀಟರ್ ಮದ್ಯ ಪತ್ತೆಯಾಗಿದೆ.ತಕ್ಷಣ ಡ್ರೈವರ್ ರಾಮಕೃಷ್ಣನ್ ಮತ್ತು ಕ್ಲೀನರ್ ರಾಜಕುಮಾರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿರುವ ಪೊಲೀಸರು, ಸ್ಪೆಷಲ್ ಡ್ರೈವ್ ಮೂಲಕ ಮದ್ಯ ಸಾಗಾಟಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ.

Also Read  ಭಯೋತ್ಪಾದಕರೊಂದಿಗೆ ನಂಟು ಆರೋಪ ➤ ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ

 

 

error: Content is protected !!
Scroll to Top