ಲಾಕ್‍ಡೌನ್ ಎಫೆಕ್ಟ್‌ನಿಂದ ನಿರುದ್ಯೋಗ ➤ ನಟ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba,ಕೊಲ್ಕತ್ತ ಜೂ.09:ಕೋವಿಡ್ ಸೋಂಕು ಎಷ್ಟೋ ಜನರ ಬದಕನ್ನೇ ಕಿತ್ತುಕೊಂಡಿದೆ. ಲಕ್ಷಾಂತರ ಜನರ ಉಸಿರನ್ನೇ ನಿಲ್ಲಿಸಿದೆ. ಇದೇ ಹಿನ್ನೆಲೆಯಲ್ಲಿ ಕೋವಿಡ್ ನಿಂದ ಕೆಲಸವಿಲ್ಲದೆ ನೊಂದ ನಟನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಲಾಕ್‍ಡೌನ್ ವೇಳೆ ಎಲ್ಲೂ ಕೆಲಸ ಸಿಗದೆ ನಿರುದ್ಯೋಗದಿಂದ ಬಳಲಿದ ಬೆಂಗಾಲಿ ನಟನೊಬ್ಬ ಕೊಲ್ಕತ್ತಾದಲ್ಲಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಅದೃಷ್ಟವಶಾತ್ ಪೊಲೀಸರು ನಟನನ್ನು ಕಾಪಾಡಿದ್ದಾರೆ.ನಿದ್ದೆ ಮಾತ್ರೆಯನ್ನು ನುಂಗಿದ 31 ವರ್ಷದ ಧಾರವಾಹಿ ನಟ ಫೇಸ್ ಬುಕ್ ಲೈವ್ ಮಾಡಿದ್ದಾನೆ. ಇದನ್ನು ಗಮನಿಸಿದ ಕೆಲವರು ಸುದ್ದಿಯನ್ನು ಪೊಲೀಸರಿಗೆ ತಿಳಿಸಿದ್ದಾರೆ. ತಕ್ಷಣ ಫೇಸ್ ಬುಕ್ ಲೈವ್ ಅನ್ನು ಟ್ರ್ಯಾಕ್ ಮಾಡಿದ ಪೊಲೀಸರು ನಟನನ್ನು ಕಾಪಾಡಿದ್ದಾರೆ.

Also Read  ಕ್ರಿಕೆಟ್ ಅಭಿಮಾನಿಗಳಿಗೆ ಡಬಲ್ ಶಾಕ್ ➤ ಎಂಎಸ್ ಧೋನಿ ಮತ್ತು ರೈನಾ ನಿವೃತ್ತಿ

error: Content is protected !!
Scroll to Top