ಬೆಲೆ ಏರಿಕೆ ಬಿಸಿಯ ನಡುವೆ ಮತ್ತೊಂದು ಶಾಕ್ ➤ ವಿದ್ಯುತ್​ ದರ ದಿಢೀರ್ ಏರಿಸಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.09:ಪೆಟ್ರೋಲ್ ಬೆಲೆ ಏರಿಕೆ ದೆಸೆಯಿಂದ ದಿನೋಪಯೋಗಿ ವಸ್ತುಗಳ ಬೆಲೆಯೂ ಗಗನಕ್ಕೆ ಏರುತ್ತಿದ್ದು, ಸಾರ್ವಜನಿಕರು ಪ್ರತಿನಿತ್ಯ ಬದುಕುವುದೇ ದುಸ್ಥರವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಇಂದು ವಿದ್ಯುತ್​ ಬೆಲೆಯನ್ನು ಮತ್ತೆ ಏರಿಸುವ ಮೂಲಕ ಜನರಿಗೆ ಶಾಕ್ ನೀಡಿದೆ. ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ನಡುವೆಯೇ ವಿದ್ಯುತ್​ ಬೆಲೆಯೂ ಇಂದು ದಾಖಲೆ ಬರೆದಿದ್ದು, ರಾಜ್ಯ ಸರ್ಕಾರ ಯೂನಿಟ್ ಗೆ 30 ಪೈಸೆ ಹೆಚ್ಚಳ‌ ಮಾಡಿ ಆದೇಶಿಸಿದೆ. ಕೆಪಿಟಿಸಿಎಲ್- ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನೂತನ ದರ ಎಪ್ರಿಲ್.1  2021 ರಿಂದಲೇ ಜಾರಿಯಾಗಲಿದೆ ಎನ್ನಲಾಗುತ್ತಿದೆ.

ಅಸಲಿಗೆ ಬೆಸ್ಕಾಂ ಸೇರಿ 5 ನಿಗಮಗಳಿಂದ ಪ್ರತಿ ಯೂನಿಟ್ ಗೆ 135 ಪೈಸೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. ಈ ಪ್ರಸ್ತಾವನೆ ಆಧರಿಸಿ ಕೆಪಿಟಿಸಿಎಲ್​ನಿಂದ ದರ ಹೆಚ್ಚಳ ಮಾಡಲಾಗುತ್ತದೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ, ಇಂದು ಸಚಿವ ಸಂಪುಟ ಸಭೆ ನಡೆಸಿ ವಿದ್ಯುತ್ ದರ ಏರಿಕೆ ಬಗ್ಗೆ ಸಿಎಂ ಯಡಿಯೂರಪ್ಪ ಚರ್ಚೆ ನಡೆಸಿದ್ದು, ಯೂನಿಟ್​ಗೆ 30 ಪೈಸೆ ಏರಿಕೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!

Join the Group

Join WhatsApp Group