ಸುಳ್ಯ: ಪಿಕಪ್ ಹಾಗೂ ಕಂಟೇನರ್ ಲಾರಿ ನಡುವೆ ಢಿಕ್ಕಿ ➤ ಐವರು ಗಂಭೀರ



(ನ್ಯೂಸ್ ಕಡಬ) newskadaba.com ಸುಳ್ಯ, ಜೂ.09. ಪಿಕಪ್ ಹಾಗೂ ಕಂಟೇನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಅಡ್ಕಾರ್ ಎಂಬಲ್ಲಿ ಬುಧವಾರದಂದು ನಡೆದಿದೆ.





ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಪಿಕಪ್ ಹಾಗೂ ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ನಡುವೆ ಜಾಲ್ಸೂರು ಗ್ರಾಮದ ಅಡ್ಕಾರಿನ ಮಾವಿನಕಟ್ಟೆ ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಪಿಕಪ್ ವಾಹನದಲ್ಲಿದ್ದ ಐವರು ಗಂಭೀರ ಗಾಯಗೊಂಡಿದ್ದು, ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

 

 

error: Content is protected !!
Scroll to Top