ಶಿರಾಡಿ: ಅನಿಲ ಸಾಗಾಟದ ಟ್ಯಾಂಕರ್ ಪಲ್ಟಿ ➤ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರು



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.10. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್‌ ಸಾಗಾಟದ ಟ್ಯಾಂಕರ್ ರಸ್ತೆಗಡ್ಡಲಾಗಿ ಮಗುಚಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.







ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಶಿರಾಡಿಯ ಕೊಡ್ಯಕಲ್ ಎಂಬಲ್ಲಿ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪುತ್ತೂರು ಅಗ್ನಿ ಶಾಮಕ ದಳದ ಸಿಬ್ಬಂದಿ, ಉಪ್ಪಿನಂಗಡಿ ಎಸ್ಐ ಕುಮಾರ್ ಕಾಂಬ್ಳೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 

 

error: Content is protected !!
Scroll to Top