ಜುಲೈನಲ್ಲಿ ಎಸ್ಎಸ್ಎಲ್’ಸಿ ಪರೀಕ್ಷೆ ➤ ಮಕ್ಕಳಿಗೆ ಆತ್ಮವಿಶ್ವಾಸ ತುಂಬಿದ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.10:ಕೊರೋನಾ ಸಾಂಕ್ರಾಮಿಕ ರೋಗದ ಆತಂಕದ ನಡುವಲ್ಲೇ ಜುಲೈ ಮೂರನೇ ವಾರದಲ್ಲಿ ಎಸ್ಎಸ್ಎಲ್’ಸಿ ಪರೀಕ್ಷೆ ಆರಂಭಿಸುವುದಾಗಿ ಹೇಳಿರುವ ರಾಜ್ಯ ಶಿಕ್ಷಣ ಇಲಾಖೆಯು, ಇದಕ್ಕಾಗಿ ಸಿದ್ಧತೆಗಳನ್ನು ಆರಂಭಿಸಿದೆ.

ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಕರು ಮಕ್ಕಳನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಈ ವೇಳೆ ಅಧಿಕಾರಿಗಳಿಗೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು, ವಿದ್ಯಾರ್ಥಿಗಳು ಹಾಗೂ ಪೋಷಕರ ವಿಶ್ವಾಸ ಗಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಸೂಚಿಸಿದ್ದಾರೆ.

Also Read  ಐಪಿಎಲ್ ನಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್

error: Content is protected !!
Scroll to Top