ದ್ವಿಚಕ್ರ ವಾಹನ ಅಪಘಾತ ➤ ಕನ್ನಡದ ಖ್ಯಾತ ನಟ ಸಂಚಾರಿ ವಿಜಯ್ ಗಂಭೀರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.13. ಬೈಕ್ ಅಪಘಾತ ಸಂಭವಿಸಿದ ಪರಿಣಾಮ ರಾಷ್ಟ್ರ ಪ್ರಶಸ್ತಿ ವಿಜೇತ, ಕನ್ನಡದ ಖ್ಯಾತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಅವರು ಶನಿವಾರ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ವೇಳೆ ಬೈಕ್ ಅಪಘಾತಕ್ಕೆ ಒಳಗಾಗಿದ್ದು, ಘಟನೆಯಲ್ಲಿ ಸಂಚಾರಿ ವಿಜಯ್ ರ ಕಾಲು ಮುರಿತಕ್ಕೆ ಒಳಗಾಗಿದ್ದು, ಮೆದುಳಿನಲ್ಲಿ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಮೆದುಳಿನ ಶಸ್ತ್ರಚಿಕಿತ್ಸೆ ನಡೆದಿದೆ. ಇದೀಗ ಅಪೋಲೊ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Also Read  ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಗೆ ಬೈಕ್ ಢಿಕ್ಕಿ- ಮೃತ್ಯು..! ➤ ಗುರುತು ಪತ್ತೆಗೆ ಮನವಿ

 

 

 

error: Content is protected !!
Scroll to Top