ಬಿರುಸುಗೊಂಡ ಮುಂಗಾರು ➤ ಬೆಳ್ಳಾರೆ ಎಸ್ಐ ಆಂಜನೇಯ ರೆಡ್ಡಿಯವರಿಂದ ಪ್ರಕಟಣೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.13. ಕರಾವಳಿಯಾದ್ಯಂತ ಮುಂಗಾರು ಬಿರುಸುಗೊಂಡಿದ್ದು, ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದ್ದಲ್ಲಿ ಸಾರ್ವಜನಿಕರು ತಕ್ಷಣವೇ ಠಾಣೆಯನ್ನು ಸಂಪರ್ಕಿಸುವಂತೆ ಎಸ್ಐ ಆಂಜನೇಯ ರೆಡ್ಡಿಯವರು ತಿಳಿಸಿದ್ದಾರೆ.

ಠಾಣಾ ವ್ಯಾಪ್ತಿಯಲ್ಲಿ ಭೂಕುಸಿತ, ನೆರೆ, ಸೇತುವೆ ಅಥವಾ ರಸ್ತೆಗಳ ಸಂಪರ್ಕ ಸ್ಥಗಿತ ಸೇರಿದಂತೆ ಪ್ರಾಕೃತಿಕ ವಿಕೋಪಗಳು ಉಂಟಾದಲ್ಲಿ ತಕ್ಷಣವೇ 9535556173, 9448623433, 9448254065, 9449011787 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. ಅಲ್ಲದೇ ಸಹಾಯವಾಣಿ 112 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Also Read  ಪರೀಕ್ಷಾ ಭಯ ನಿವಾರಣೆಗೆ ಸರಳ ಸೂತ್ರ

 

 

 

error: Content is protected !!
Scroll to Top