ಮಂಗಳೂರು: ಅಕ್ರಮ ಎಂಡಿಎಂಎ ಸಾಗಾಟ ➤ 3.90 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 13. ನಿಷೇಧಿತ ಮಾದಕ ವಸ್ತು ಎಂಡಿಎಂಎ ಯನ್ನು ಬೆಂಗಳೂರಿನಿಂದ ಕಾಸರಗೋಡಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ.

ಬಂಧಿತರನ್ನು ಕಾಸರಗೋಡಿನ ಶಫೀಕ್‌ ಹಾಗೂ ಅಲ್ತಾಫ್‌ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಒಟ್ಟು 65 ಗ್ರಾಂ ತೂಕದ ಸುಮಾರು 3.90 ಲಕ್ಷ ರೂ. ಮೌಲ್ಯದ ಎಂಡಿಎಂ, ಸ್ವಿಫ್ಟ್‌ ಕಾರು ಹಾಗೂ ಸುಮಾರು 11 ಸಾವಿರ ಮೌಲ್ಯದ 4 ಮೊಬೈಲ್‌‌ ಸಹಿತ ಒಟ್ಟು 9.01 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿದ್ದಾರೆ. ಉಪ್ಪಿನಂಗಡಿ ಕಡೆಯಿಂದ ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಅಕ್ರಮವಾಗಿ ಮೆಲ್ಕಾರ್‌‌ ಮುಡಿಪು, ನಾಟೆಕಲ್‌‌ ರಸ್ತೆ ಮಾರ್ಗವಾಗಿ ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯನ್ನಾಧರಿಸಿ, ಪಿಎಸ್‌ಐ ಮಲ್ಲಿಕಾರ್ಜುನ ಬಿರದಾರ ಹಾಗೂ ಸಿಬ್ಬಂದಿಗಳು ಮಂಜನಾಡಿ ಗ್ರಾಮದ ನಾಟೆಕಲ್‌‌ ವಿಜಯನಗರ ಎಂಬಲ್ಲಿ ಆರೋಪಿಗಳ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮಂಗಳೂರು: ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ 7ನೇ ಇಂದು ಶುಭಾರಂಭ  

 

 

error: Content is protected !!
Scroll to Top