ಜೂ.17 ರವರೆಗೆ ಕರ್ನಾಟಕದಲ್ಲಿ ಭಾರೀ ಗಾಳಿ – ಮಳೆ ➤ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ರಾಜ್ಯದಲ್ಲಿ ಮುಂಗಾರು ಬಿರುಸುಗೊಂಡಿರುವುದರಿಂದ ಭಾರೀ ಮಳೆಯಾಗುತ್ತಿದ್ದು, ಇದೀಗ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜೂನ್ 17 ರವರೆಗೆ ಭಾರೀ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿರುವ ಹಿನ್ನೆಲೆಯಲ್ಲಿ ಇಂದು ರೆಡ್ ಅಲರ್ಟ್ ಹಾಗೂ ನಾಳೆಯಿಂದ ಜೂನ್ 17 ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಹಾಗೂ 17 ರಂದು ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

 

 

 

Scroll to Top