ಮಾಣಿ: ಖಾಸಗಿ ಬಸ್ ಪಲ್ಟಿ ► ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.26. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಖಾಸಗಿ ಬಸ್ಸೊಂದು ಪಟ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸುಗಮ ಸಂಸ್ಥೆಯ ಖಾಸಗಿ ಬಸ್ಸು ಬುಡೋಳಿ ಸಮೀಪ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

error: Content is protected !!

Join the Group

Join WhatsApp Group