ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ➤ ಪರೀಕ್ಷೆ ಇಲ್ಲದೆ ಪಾಸ್ ಮಾಡುವುದಕ್ಕೆ ಹೈಕೋರ್ಟ್ ತಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.15. ಪರೀಕ್ಷೆ ಇಲ್ಲದೇ ಪಾಸ್ ಆಗುವ ಖುಷಿಯಲ್ಲಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿರುವ ಹೈಕೋರ್ಟ್, ಪರೀಕ್ಷೆ ರಹಿತ ಫಲಿತಾಂಶ ಪ್ರಕಟಿಸುವುದಕ್ಕೆ ತಡೆಯಾಜ್ಞೆ ನೀಡಿದೆ.

ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕದ ಮಾನದಂಡದಲ್ಲಿ ಉತ್ತೀರ್ಣಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು. ಆದರೆ ರಿಪೀಟರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ತಿಳಿಸಲಾಗಿತ್ತು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿರುವ ರಿಪೀಟರ್ಸ್ ವಿದ್ಯಾರ್ಥಿಗಳು, ಸರಕಾರದ ತಾರತಮ್ಯ ನೀತಿಯನ್ನು ಪ್ರಶ್ನಿಸಿದ್ದರು‌. ಪಾಸ್ ಮಾಡುವುದಾದರೆ ಎಲ್ಲರನ್ನು ಪಾಸ್ ಮಾಡಬೇಕಿತ್ತು. ರೆಗ್ಯುಲರ್ ವಿದ್ಯಾರ್ಥಿಗಳನ್ನ ಪಾಸ್ ಮಾಡಿ ರಿಪೀಟರ್ಸ್ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸುವುದು ಸರಿಯಲ್ಲ ಎಂಬ ತೀರ್ಮಾನಕ್ಕೆ ಬಂದ ಹೈಕೋರ್ಟ್, ಗುರುವಾರದ ತನಕ ಫಲಿತಾಂಶ ಪ್ರಕಟಿಸದಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಜೊತೆಗೆ ಗುರುವಾರದೊಳಗೆ ನ್ಯಾಯಾಲಯಕ್ಕೆ ಮಾಹಿತಿ‌ ನೀಡುವಂತೆ ಆದೇಶಿಸಿದೆ.

error: Content is protected !!
Scroll to Top