ಜೂನ್‌ 21: ಬೆಂಗಳೂರಲ್ಲಿ 1 ಲಕ್ಷ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ಜೂನ್‌ 21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಚುಯಲ್‌ ವೇದಿಕೆ ಮೂಲಕ ಯೋಗಾಭ್ಯಾಸ ನಡೆಸಲಿದ್ದಾರೆ.

ಈ ಕುರಿತು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ. ಎನ್‌. ಅಶ್ವತ್ಥನಾರಾಯಣ ತಿಳಿಸಿದರು. ”ಕೋವಿಡ್‌ ಕಾರಣದಿಂದ ಈ ವರ್ಷದ ಸರಕಾರಿ ದಿನಾಚರಣೆ ಕೇವಲ 100 ಜನರ ಉಪಸ್ಥಿತಿಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ. ಬೆಳಗ್ಗೆ 7ರಿಂದ 8 ಗಂಟೆವರೆಗೆ ಕಾರ್ಯಕ್ರಮ ನಡೆಯುತ್ತದೆ” ಎಂದು ಅವರು ತಿಳಿಸಿದರು.

Also Read  ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ - ರೋಗಿಗಳ ಸ್ಥಳಾಂತರ

 

 

error: Content is protected !!
Scroll to Top