(ನ್ಯೂಸ್ ಕಡಬ) newskadaba,ಮಂಗಳೂರು ಜೂ.15:ಮಂಗಳವಾರ ಕುಸಿತಕ್ಕೆ ಒಳಗಾದ ಮರವೂರು ಸೇತುವೆಯ ಪುನರ್ ನಿರ್ಮಾಣ ಮಾಡಬೇಕೆ ಅಥವಾ ದುರಸ್ತಿ ಕೈಗೊಳ್ಳಬೇಕೆ ಎನ್ನುವುದಕ್ಕೆ ತಜ್ಞರನ್ನೊಳಗೊಂಡ ಸಮಿತಿ ಪರಿಶೀಲಿಸಿ ಇನ್ನೆರೆಡು ದಿನದೊಳಗೆ ವರದಿ ನೀಡಲಿದೆ. ವರದಿಯನ್ನಾಧರಿಸಿ, ಅಗತ್ಯ ಅನುದಾನವನ್ನು ಸಿಎಂ ಜತೆ ಮಾತನಾಡಿ ಬಿಡುಗಡೆ ಮಾಡಿಸಲಾಗುವುದು ಎಂದು ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮರವೂರು ಸೇತುವೆಯ ಬಿರುಕನ್ನು ಪರಿಶೀಲಿಸಿದ ಅವರು ಈ ರಸ್ತೆಯ ಸೇತುವೆಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು 50 ಕೋಟಿ ರೂ. ಮಂಜೂರಾಗಿದ್ದು, ಹಾಲಿ ಸೇತುವೆಯ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಸೇತುವೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.