ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.15:ಭಾರತದಲ್ಲಿ ಕೊರೋನಾ 2ನೇ ಅಲೆಯ ತೀವ್ರತೆ ಮತ್ತಷ್ಟು ಕಡಿಮೆಯಾಗಿದೆ. ಮಂಗಳವಾರ 60,471 ಜನರಲ್ಲಿ ಸೋಂಕು ಕಂಡು ಬಂದಿದ್ದು, ಇದು 75 ದಿನಗಳಲ್ಲೇ ಕನಿಷ್ಟವಾಗಿದೆ. ಇದೇ ಅವಧಿಯಲ್ಲಿ ದೇಶದಲ್ಲಿ 2,726 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,95,70,881ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,77,031ಕ್ಕೆ ಏರಿಕೆಯಾಗಿದೆ.  ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ನಡುವಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆ 9,13,378ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,17,525 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,82,80,472ಕ್ಕೆ ತಲುಪಿದೆ.

Also Read  ಆಕಸ್ಮಿಕವಾಗಿ ಬಾವಿಗೆ ಕಾಲುಜಾರಿ ಬಿದ್ದು ವ್ಯಕ್ತಿ ಮೃತ್ಯು

error: Content is protected !!
Scroll to Top