ಇಬ್ಬರು ಯುವಕರಿಗೆ “ಸಂಚಾರಿ ವಿಜಯ್” ಕಣ್ಣು ಜೋಡಣೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.15: ಸಂಚಾರಿ ವಿಜಯ್ ಅವರ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿಯುತ್ತಿದೆ. ಅವರ ಸಾಮಾಜಿಕ ಕಾರ್ಯ, ನಟನೆ, ಒಳ್ಳೆಯ ಗುಣ ಇರುವಂತಹ ನಟನನ್ನ ಕಳೆದುಕೊಂಡು ಕನ್ನಡಿಗರು ಕಣ್ಣೀರು ಹಾಕುತ್ತಾ ಇದ್ದಾರೆ. ಆದರೆ ಈಗ ಅವರ ನಿಧನದ ನಂತರ ಮಾಡಿರುವ ಮಹಾತ್ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಅವರ ಅಂಗಾಂಗ ದಾನದ ನಿರ್ಧಾರಕ್ಕೆ ವೈದ್ಯರು ಅವರ ಪೋಷಕರಿಗೆ ಧನ್ಯವಾದ ತಿಳಿಸುತ್ತಾ ಇದ್ದಾರೆ.

ಸಂಚಾರಿ ವಿಜಯ್ ಅವರ ಕಣ್ಣುಗಳನ್ನ ಮಿಂಟೋ ಆಸ್ಪತ್ರೆಯಲ್ಲಿ ಇಬ್ಬರು ಯುವಕರಿಗೆ ಜೋಡಣೆ ಮಾಡಲಾಗಿದೆ. ಸಂಚಾರಿ ವಿಜಯ್ ಅವರ ವಯಸ್ಸಿನ ಒಬ್ಬರಿಗೆ ಮತ್ತು ಅವರಿಗಿಂತ ಚಿಕ್ಕ ವಯಸ್ಸಿನ ಮತ್ತೊಬ್ಬ ವಯಸ್ಸಿನ ಯುವಕನಿಗೆ ಕಣ್ಣು ಜೋಡಣೆ ಮಾಡಲಾಗಿದೆ. ಇಂದು ಬೆಳಗ್ಗೆಯೇ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿರೋದಾಗಿ ಮಿಂಟೋ ಆಸ್ಪತ್ರೆ ನಿರ್ದೇಶಕಿ ಡಾ. ಸುಜಾತ ತಿಳಿಸಿದ್ದಾರೆ.

Also Read  ಶಕ್ತಿನಗರ: ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ

 

error: Content is protected !!
Scroll to Top