ರಾಜ್ಯದಲ್ಲಿ ಇಂದು 7,345 ಕೊರೊನಾ ಪ್ರಕರಣ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.16: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 7,345 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 148 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 27,84,355ಕ್ಕೆ ಏರಿಕೆಯಾಗಿದೆ.

 

ರಾಜ್ಯ ಆರೋಗ್ಯ ಇಲಾಖೆ ಬುಧವಾರದ ಹೆಲ್ತ್​​ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಇಂದು 7,345 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. 148 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 33,296 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಇಂದು 17,913 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 25,99,472 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 1,51,566 ಸಕ್ರಿಯ ಪ್ರಕರಣಗಳಿವೆ.

Also Read  ಬೆಳ್ತಂಗಡಿ: ಹೆಂಡತಿಯನ್ನೇ ಕೊಲೆಗೈದ ಭೂಪ..!

error: Content is protected !!