ಉದ್ಯಾವರ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) Newskadaba.com ಉದ್ಯಾವರ, ಜೂ. 17. ಮಹಿಳೆಯೋರ್ವರು ನೇಣುಬಿಗಿದು ಆಥಮಹತ್ಯೆ ಮಾಡಿಕೊಂಡ ಘಟನೆ ಪಿತ್ರೋಡಿ ಎಂಬಲ್ಲಿ ಗುರುವಾರದಂದು ನಡೆದಿದೆ.

ಆತ್ಮಹತ್ಯೆಗೈದವರನ್ನು ಪಿತ್ರೋಡಿ ನಿವಾಸಿ ಸುಕನ್ಯ(52) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಕ್ಷಣವೇ ಸ್ಥಳೀಯರ ಸಹಾಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top