ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಭಾರೀ ಏರಿಕೆ..!!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.17: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಇಂದು 679 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 657 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದೇ ಸಮಯದಲ್ಲಿ 11 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

 

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 86,344ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರ ಸಂಖ್ಯೆ 78,730ಕ್ಕೆ ಏರಿಕೆಯಾಗಿದೆ.

Also Read  ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ➤ ಕೆ. ಜಯಪ್ರಕಾಶ್ ಹೆಗ್ಡೆ

error: Content is protected !!
Scroll to Top