ಉಡುಪಿ: ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಹೋರಾಟದ ಹಿನ್ನೆಲೆ ➤ ಸಿಎಫ್ಐ ವತಿಯಿಂದ ಮಾಜಿ ಸಚಿವ, ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತರ ಭೇಟಿ

(ನ್ಯೂಸ್ ಕಡಬ) Newskadaba.com ಉಡುಪಿ, ಜೂ. 18. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಆಸಿಲ್ ಅಕ್ರಮ್ ನೇತೃತ್ವದ ಉಡುಪಿ ಜಿಲ್ಲಾ ನಿಯೋಗವು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವಲ್ಲಿ ಸರಕಾರದ ನಿರ್ಲಕ್ಷ್ಯದ ಬಗ್ಗೆ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಸಾಮಾಜಿಕ ಕಾರ್ಯಕರ್ತ ಅಮೃತ್ ಶೆಣೈ ಮತ್ತು ಪತ್ರಕರ್ತ ಶಶಿಧರ್ ಹೆಮ್ಮಾಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಜಿಲ್ಲೆಗೆ ಆಗಿರುವ ಅನ್ಯಾಯದ ವಿರುದ್ಧ, ಸರಕಾರಿ ಮೆಡಿಕಲ್ ಕಾಲೇಜಿಗಾಗಿ ನಮ್ಮ ಆಂದೋಲನಕ್ಕೆ‌ ಅವರ ಬೆಂಬಲಿಗರೊಂದಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರೆಲ್ಲರೂ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ, ಜಿಲ್ಲಾ ಮುಖಂಡರಾದ ನವಾಝ್ ಶೇಕ್, ಉಡುಪಿ ಜಿಲ್ಲಾ ಸಮಿತಿ ಸದಸ್ಯ ಅರ್ಫಾಝ್, ಕುಂದಾಪುರ ಜಿಲ್ಲಾ ಸಮಿತಿ ಸದಸ್ಯ ಸಹದ್ ಬಸ್ರೂರು ಮೊದಲಾದವರು ಉಪಸ್ಥಿತರಿದ್ದರು.

Also Read  ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕಿದ್ದ ಬಾಲಕನಿಗೆ ಕೊರೊನಾ

error: Content is protected !!
Scroll to Top