ಮಂಗಳೂರು: ಸತತ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

(ನ್ಯೂಸ್ ಕಡಬ) Newskadaba.com ಮಂಗಳೂರು, ಜೂ. 18. ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಹರೀಶ್ ಆಚಾರಿ ಎಂದು ಗುರುತಿಸಲಾಗಿದೆ. ಈತ 2013ರ ಜನವರಿಯಲ್ಲಿ ಮನೆಯೊಂದರ ಹೆಂಚನ್ನು ತೆಗೆದು ಒಳನುಗ್ಗಿ ಕಳ್ಳತನಕ್ಕೆತ್ನಿಸಿದ್ದು, ಈ ಸಂದರ್ಭ ಮನೆಯವರ ಕಿರುಚಾಟ ಕೇಳಿ ಆರೋಪಿ ಪರಾರಿಯಾಗಿದ್ದನು. ಈ ಕುರಿತು ಬಜಪ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಜಾಮೀನು ಪಡೆದು ಈತ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದನು‌. ಈತನ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ಜ. 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ➤ ಪ್ರಧಾನಿಯಿಂದ ಉದ್ಘಾಟನೆ

error: Content is protected !!
Scroll to Top