ಫ್ಲೈಯಿಂಗ್​ ಸಿಖ್​ ಮಿಲ್ಕಾ ಸಿಂಗ್​ ನಿಧನ ➤ ಪ್ರಧಾನಿ ಸೇರಿದಂತೆ ಗಣ್ಯರಿಂದ ಸಂತಾಪ..!

(ನ್ಯೂಸ್ ಕಡಬ) newskadaba,ಚಂಡೀಗಢ ಜೂ.19: ಭಾರತದ ಕೀರ್ತಿ ಪತಾಕೆಯನ್ನು ದೇಶ ವಿದೇಶದಲ್ಲಿ ಹಾರಿಸುವಂತೆ ಮಾಡಿದ್ದ ದಿಗ್ಗಜ ಅಥ್ಲೀಟ್​ ಮಿಲ್ಕಾ ಸಿಂಗ್​ (Milkha Singh) ಇನ್ನಿಲ್ಲ. 91 ವರ್ಷದ ಮಿಲ್ಕಾ ಸಿಂಗ್​ ಹಾಗೂ ಅವರ ಮಡದಿ ನಿರ್ಮಲ್​ ಕೌರ್​ ಅವರಿಗೆ ಕಳೆದ ತಿಂಗಳು ಕೊರೋನಾ ಸೋಂಕಾಗಿತ್ತು. ಸೊಂಕಾಗಿತ್ತು. ಕಳೆದ ಭಾನುವಾರ ನಿರ್ಮಲ್​ ಕೌರ್​ ಅವರು ಕೋವಿಡ್​ನಿಂದಾಗಿಯೇ ಕೊನೆಯುಸಿರೆಳೆದಿದ್ದರು. ಕಳೆದ ಒಂದು ತಿಂಗಳಿನಿಂದ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಿಲ್ಕಾ ಸಿಂಗ್​​ ಅವರು ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಮಿಲ್ಕಾ ಸಿಂಗ್​ ಅವರು ಮೂವರು ಹೆಣ್ಣು ಮಕ್ಕಳು ಹಾಗೂ ಓರ್ವ ಮಗನನ್ನು ಅಗಲಿದ್ದಾರೆ.

ಮಿಲ್ಕಾ ಸಿಂಗ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮಹಾನ್​ ಕ್ರೀಡಾಪಟುವನ್ನು ಕಳೆದುಕೊಂಡಿದ್ದೇವೆ. ಇಡೀ ದೇಶದ ಕಲ್ಪನೆಯ ಮೇಲೆ ಹಿಡಿತ ಸಾಧಿಸಿದ್ದ ಮಿಲ್ಕಾ ಸಿಂಗ್​ ಅಸಂಖ್ಯ ಜನರ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದ್ದರು ಎಂದು ಟ್ವೀಟ್​ ಮಾಡಿದ್ದಾರೆ.ಮಿಲ್ಕಾ ಸಿಂಗ್​ ಅವರ ನಿಧನಕ್ಕೆ ರಾಜಕೀಯ ನಾಯಕರು, ಕ್ರೀಡಾಪಟುಗಳು ಹಾಗೂ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ನಟ ಶಾರುಖ್​ ಖಾನ್, ಪ್ರಿಯಾಂಕಾ ಚೋಪ್ರಾ, ಅಕ್ಷಯ್​ ಕುಮಾರ್ ಸೇರಿದಂತೆ ಸಾಕಷ್ಟು ಮಂದಿ ಕಂಬನಿ ಮಿಡಿದಿದ್ದಾರೆ.

Also Read  ಮನೆಯಲ್ಲಿನ ವ್ಯವಸ್ಥೆಯನ್ನು ಸರಿ ಮಾಡಲಾಗದವನು ಸಮಾಜದ ನಾಯಕನಾಗಲು ಅನರ್ಹ►► ಪ್ರವೀಣ್ ಕುಮಾರ್ ಕೆಡೆಂಜಿ

error: Content is protected !!
Scroll to Top