25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶತಕ ಬಾರಿಸಿದ ಪೆಟ್ರೋಲ್ ಬೆಲೆ..?!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.19: ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ನಿನ್ನೆಯಷ್ಟೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಪೆಟ್ರೋಲ್ ಬೆಲೆ ಶತಕ ಬಾರಿಸುವ ಮೂಲಕ ವಾಹನ ಸವಾರರಿಗೆ ಮತ್ತಷ್ಟು ಶಾಕ್ ನೀಡಿದೆ.

ಕರ್ನಾಟಕದ ಬೆಂಗಳೂರು, ಉತ್ತರ ಕನ್ನಡದ ಶಿರಸಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಚಾಮರಾಜನಗರ, ಹಾವೇರಿ, ಬೆಂಗಳೂರು ಗ್ರಾಮಾಂತರ, ಧಾರವಾಡ, ಗುಲ್ಬರ್ಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾಸನ, ಹಾವೇರಿ, ಕೊಡಗು, ರಾಯಚೂರು, ರಾಮನಗರ, ದಾವಣಗೆರೆ, ತುಮಕೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಉಳಿದ ಜಿಲ್ಲೆಗಳಲ್ಲೂ ಸದ್ಯದಲ್ಲೇ ಪೆಟ್ರೋಲ್ ಬೆಲೆ ಶತಕ ಬಾರಿಸಲಿದೆ.ಉಡುಪಿ, ದಕ್ಷಿಣ ಕನ್ನಡ ಮತ್ತು ಬೆಂಗಳೂರಿನಲ್ಲಿ ನಿನ್ನೆ 1 ಲೀಟರ್ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ದಕ್ಷಿಣ ಕನ್ನಡದ ಸುಳ್ಯದಲ್ಲಿ ನಿನ್ನೆ 1 ಲೀಟರ್ ಪೆಟ್ರೋಲ್​ಗೆ 100.19 ರೂ. ಆಗಿದೆ ಇದರಿಂದ ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾದಂತಾಗಿದೆ.

error: Content is protected !!
Scroll to Top