ರಾಜ್ಯದಲ್ಲಿ ಇಳಿಮುಖದತ್ತ ಸಾಗಿದ ಕೊರೋನಾ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.19:ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖದತ್ತ ಸಾಗಿದೆ. ಇಂದು 5,815 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 28,01,936ಕ್ಕೆ ಏರಿಕೆಯಾಗಿದೆ.

 

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 161 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 33,763ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 11,832 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 26,37,279ಕ್ಕೆ ಏರಿಕೆಯಾಗಿದೆ. ಇನ್ನು 1,30,872 ಸಕ್ರೀಯ ಪ್ರಕರಣಗಳಿವೆ.

Scroll to Top