(ನ್ಯೂಸ್ ಕಡಬ) newskadaba.com ಕಡಬ, ಜೂ.21. ನೆಟ್ಟಣ ಸಂತ ಮೇರಿಸ್ ಚರ್ಚ್ ವತಿಯಿಂದ ಬಿಳಿನೆಲೆ ಗ್ರಾಮ ಪಂಚಾಯಿತಿಗೆ ಆರೋಗ್ಯ ರಕ್ಷಾ ಪರಿಕರಣಗಳನ್ನು ವಿತರಿಸಲಾಯಿತು.
ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕೊರೊನ ವಾರಿಯರ್ಸ್ ಆಗಿ ಕೋವಿಡ್ 19 ಅನ್ನು ಗ್ರಾಮ ಮಟ್ಟದಲ್ಲಿ ಹತೋಟಿಗೆ ತರುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಮನಗಂಡು ನೆಟ್ಟಣ ಸಂತ ಮೇರಿಸ್ ಚರ್ಚ್ ವತಿಯಿಂದ ಗ್ರಾಮ ಪಂಚಾಯಿತಿಗೆ ಮತ್ತು ಪಂಚಾಯಿತಿಗೆ ಬರುವ ಸಾರ್ವಜನಿಕರ ಅನುಕೂಲತೆಗಾಗಿ ಪರಿಕರಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಶಂಕರ್ ಮಾತನಾಡಿ ನೆಟ್ಟಣ ಮತ್ತು ಬಿಳಿನೆಲೆ ಯಲ್ಲಿ ಇರುವ ಬಡ ಕುಂಟುಂಬ ಗಳಿಗೆ ದಿನಸಿ ಸಾಮಗ್ರಿಗಳ ಕಿಟ್ಟನ್ನು ವಿತರಿಸುವುದು ಹಾಗೂ ಕೋವಿಡ್ ಪಾಸಿಟಿವ್ ಆಗಿ ಕ್ವಾರಂಟೈನ್ ಇರುವ ಮನೆಯವರಿಗೆ ಪಲ್ಸ್ ಆಕ್ಸಿಮೀಟರ್ ಅನ್ನು ಒದಗಿಸುವ ತಂಡದ ಸಾಮಾಜಿಕ ಕಾಳಜಿಯನ್ನು ಶ್ಲಾಘಿಸಿದರು. ಪಂಚಾಯತ್ ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸಂತ ಮೇರಿಸ್ ಚರ್ಚ್, ನೆಟ್ಟಣ ಹಾಗೂ ಕೋವಿಡ್ ಕೇರ್ ತಂಡ ಮಾಡುವ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೀನಾ ಎ. ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕೋವಿಡ್ ಕೇರ್ ತಂಡದ ಸದಸ್ಯರು ಸಹಕರಿಸಿದರು.