ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 542 ಜನರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba,ಮಂಗಳೂರು ಜೂ.21: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 542 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 89249 ಕ್ಕೆ ಏರಿಕೆಯಾಗಿದೆ.

ಇಂದು ಸೋಂಕಿನಿಂದ 637 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 81167 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು 14 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 1062 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 7017 ಸಕ್ರಿಯ ಪ್ರಕರಣಗಳಿವೆ.

error: Content is protected !!

Join the Group

Join WhatsApp Group