ಲಾಕ್‍ಡೌನ್ ನಡುವೆ ಬೆಂಗಳೂರಿನಿಂದ ಜಿಲ್ಲೆಗೆ ಬಂದ ಕೆಎಸ್ಸಾರ್ಟಿಸಿ ಬಸ್ ➤ ಕೊಕ್ಕಡದಲ್ಲಿ ತಡೆದು ವಾಪಸು ಬೆಂಗಳೂರಿಗೆ ಕಳುಹಿಸಿದ ಪೊಲೀಸರು



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.22. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿದ್ದರೂ ಬೆಂಗಳೂರಿನಿಂದ ಧರ್ಮಸ್ಥಳಕ್ಕೆಂದು ಆಗಮಿಸಿದ ಕೆಎಸ್ಸಾರ್ಟಿಸಿ ಬಸ್ಸನ್ನು ಕೊಕ್ಕಡದಲ್ಲಿ ಪೊಲೀಸರು ತಡೆದು ಹಿಂದಕ್ಕೆ ಕಳುಹಿಸಿದ ಘಟನೆ ಸೋಮವಾರದಂದು ನಡೆದಿದೆ.





ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‍ಡೌನ್ ಇನ್ನೂ ಜಾರಿಯಲ್ಲಿದ್ದು, ಸಾರ್ವಜನಿಕ ಬಸ್ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಈ ನಡುವೆಯೂ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ ಆಗಮಿಸಿದ್ದು, ಬಸ್ಸಿನಲ್ಲಿ ಒಟ್ಟು 22 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ವಿಚಾರ ತಿಳಿದ ಪೊಲೀಸರು ಕೊಕ್ಕಡದಲ್ಲಿ ಬಸ್ಸನ್ನು ತಡೆದು ಬೆಂಗಳೂರಿಗೆ ವಾಪಾಸು ಕಳುಹಿಸಿದ್ದಾರೆ. ಬಸ್ ನಲ್ಲಿದ್ದ ಪ್ರಯಾಣಿಕರು ಅನಿವಾರ್ಯವಾಗಿ ಹಿಂದಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.






 

 

 

error: Content is protected !!
Scroll to Top