ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಅವಶ್ಯಕ ➤ ಕ್ಯಾಂಪಸ್ ಫ್ರಂಟ್ ಹೋರಾಟ

(ನ್ಯೂಸ್ ಕಡಬ) Newskadaba.com ಉಡುಪಿ, ಜೂ. 22. ಹಲವು ವರ್ಷಗಳ ಬೇಡಿಕೆಯಾಗಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಇನ್ನೂ ಕೂಡಾ ಉಡುಪಿ ಜಿಲ್ಲೆಗೆ ಒದಗಿ ಬಂದಿಲ್ಲ. ಒಂದು ವಿದ್ಯಾರ್ಥಿ ಅವನ ಶಾಲಾ ಜೀವನದಲ್ಲಿ ಇರುವಾಗಲೇ ಆತನೊಬ್ಬ ವೈದ್ಯನಾಗಬೇಕೆಂಬ ಕನಸನ್ನು ಇಟ್ಟುಕೊಂಡು ಅದರ ಹಿಂದೆ ಬಹಳಷ್ಟು ಶ್ರಮವಹಿಸುತ್ತಾನೆ. ಆದರೆ ನೀಟ್ ಪರೀಕ್ಷೆ ಬರೆದ ನಂತರ ಕಾಲೇಜು ಪ್ರವೇಶ ಸಮಯದಲ್ಲಿ ಅಲ್ಲಿಯ ಶುಲ್ಕ ರಚನೆ ನೋಡಿದಾಗ ಅವನ ಕನಸನ್ನು ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಲಕ್ಷಗಟ್ಟಲೆ ಫೀಸು ನೀಡಲು ಸಾಧ್ಯವಾಗದೆ ಮತ್ತು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದೆ ಇರುವುದರಿಂದ ಆ ವಿದ್ಯಾರ್ಥಿ ಶಿಕ್ಷಣದಿಂದ ಹಿಂಜರಿಯುತ್ತಾನೆ. ಈ ವಿಚಾರದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಬರುವಂತಹ ಬಜೆಟ್ ಅಧಿವೇಶನದಲ್ಲಿ ಈ ವಿಷಯವನ್ನು ಉಲ್ಲೇಖಿಸಬೇಕೆಂದು ಮನವಿ ಮಾಡಲಾಯಿತು.


ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಿಂದ ಬಂದ ಉತ್ತರ ಒಂದು ಬೇಜವಾಬ್ದಾರಿತನದಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಬಹಳಷ್ಟು ಕಡೆಗಳಲ್ಲಿ ಸರ್ಕಾರಿ ಭೂಮಿ ಇದ್ದರೂ ಕೂಡಾ ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಸರ್ಕಾರದ ಭೂಮಿ ಇಲ್ಲ ಎಂದು ಈ ವೇಳೆ ಜಿಲ್ಲಾಧಿಕಾರಿ ಹೇಳಿದ್ದಾರೆ. ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿ ಈ ರೀತಿಯ ಉತ್ತರ ಕೊಡುವುದು ಎಷ್ಟರ ಮಟ್ಟಿಗೆ ಸರಿ?ಎಂಬುದನ್ನು ಕ್ಯಾಂಪಸ್ ಫ್ರಂಟ್ ಪ್ರಶ್ನಿಸುತ್ತಿದೆ. ರಾಜ್ಯದಲ್ಲಿ ಸುಮಾರು 19 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಇದೆ. ಯಾವ ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲವೋ, ಅಲ್ಲಿ ಇರುವಂತಹ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಇಂತಿಷ್ಟು ಶೇಕಡಾದಷ್ಟು ಸರ್ಕಾರದ ಕೋಟಾ ಅಂತ ಇದೆ. ಒಂದು ಬುದ್ಧಿವಂತರ ಜಿಲ್ಲೆ ಎಂದು ಖ್ಯಾತಿ ಪಡೆದ ಉಡುಪಿ ಜಿಲ್ಲೆಗೆ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಕೂಡಾ ಇಲ್ಲ, ಇಲ್ಲಿರುವಂತಹ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಸರ್ಕಾರದ ಕೋಟಾ ಕೂಡ ಇಲ್ಲ. ಇದೊಂದು ಉಡುಪಿ ಜಿಲ್ಲೆಗೆ ಆಗಿರುವಂತಹ ದೊಡ್ಡ ಅವಮಾನ ಮತ್ತು ದೊಡ್ಡ ಅನ್ಯಾಯ ಕೂಡ ಹೌದು. ಜಿಲ್ಲೆಯ ಉಸ್ತುವಾರಿ ಸಚಿವರಾದ ಗೃಹಮಂತ್ರಿಯವರಿಗೆ ಇದರ ಬಗ್ಗೆ ಗಮನ ಕೊಡಲು ಸಮಯವೇ ಇಲ್ಲದಾಗಿದೆ. ಜಿಲ್ಲೆಯ ಅಭಿವೃದ್ದಿಗೆ ಶ್ರಮವಹಿಸಲು ಸಾಧ್ಯವಾಗದ ಇವರು ರಾಜ್ಯದ ಗೃಹಮಂತ್ರಿ ಸ್ಥಾನವನ್ನು ಯಾವ ರೀತಿ ನಿಭಾಯಿಸುತ್ತಾರೆ ಎಂಬ ಕುತೂಹಲ ಮೂಡಿದೆ.
ಈಗಾಗಲೇ ಈ ವಿಚಾರದಲ್ಲಿ ತೀವ್ರ ರೀತಿಯ ಹೋರಾಟ ನಡೆಸಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿಯು ತಯಾರಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ “Udupi Demands Govt Medical College” ಎಂಬ ಚಳುವಳಿಯನ್ನು ಆರಂಭಿಸಿದ್ದು, ಇದರ ಭಾಗವಾಗಿ ಈಗಾಗಲೇ ಹಲವಾರು ಜನಸಾಮಾನ್ಯರನ್ನು, ಪ್ರಗತಿಪರ ಚಿಂತಕರನ್ನು ಮತ್ತು ಇಲ್ಲಿರುವಂತಹ ವಿವಿಧ ಸಾಮಾಜಿಕ ಮತ್ತು ವಿದ್ಯಾರ್ಥಿ ಸಂಘಟನೆಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ಎಲ್ಲರೂ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ, ಮುಂದಿನ ದಿನಗಳಲ್ಲಿ ಎಲ್ಲರನ್ನೂ ಸೇರಿಸಿಕೊಂಡು ಒಂದು ಐತಿಹಾಸಿಕ ಆಂದೋಲನ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ನೇತೃತ್ವದಲ್ಲಿ ನಡೆಯಲಿದೆ. ಉಡುಪಿಯ ಜನರು ಇದಕ್ಕೆ ಸಾಕ್ಷಿಯಾಗಲಿದ್ದಾರೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ನಾವು ಈಗಾಗಲೇ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಈ ಹೋರಾಟವು ತೀವ್ರ ಸ್ವರೂಪ ಪಡೆಯಲಿಕ್ಕಿದೆ ಎಂದು ಈ ಪತ್ರಿಕಾಗೋಷ್ಠಿಯ ಮುಖಾಂತರ ಎಚ್ಚರಿಸುತ್ತಿದ್ದೇವೆ.

Also Read  ಕಾಳಿಂಗ ಸರ್ಪದ ಹಣೆಗೆ ಮುತ್ತಿಟ್ಟ ಅರ್ಜುನ್ ➤ ವಿಡಿಯೋ ವೈರಲ್

ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ನವಾಜ್ ಉಡುಪಿ ಜಿಲ್ಲಾ ಮುಖಂಡರು, ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲೆ, ಅಸೀಲ್ ಅಕ್ರಂ ಜಿಲ್ಲಾಧ್ಯಕ್ಷರು ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲೆ, ಮಸೂದ್ ಮನ್ನಾ ಜಿಲ್ಲಾ ಕಾರ್ಯದರ್ಶಿ, ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲೆ, ಅನ್ಫಾಲ್ ಗಂಗೊಳ್ಳಿ ಜಿಲ್ಲಾ ಕಾರ್ಯದರ್ಶಿ, ಕ್ಯಾಂಪಸ್ ಫ್ರಂಟ್ ಕುಂದಾಪುರ, ಝಮ್ ಝಮ್ ಜಿಲ್ಲಾ ಮುಖಂಡರು, ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲೆ ಮೊದಲಾದವರು ಉಪಸ್ಥಿತರಿದ್ದರು.

Also Read  ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

error: Content is protected !!
Scroll to Top