ಮಾ. 23 ರಿಂದ ಎಸೆಸೆಲ್ಸಿ ಪರೀಕ್ಷೆ ಪ್ರಾರಂಭ ► ಆಕ್ಷೇಪಣೆಗೆ ಒಂದು ತಿಂಗಳ ಕಾಲಾವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.27. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಪ್ರಕಟಿಸಿದ್ದು, 2018 ರ ಮಾರ್ಚ್ 23 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆ ನಡೆಯಲಿದೆ.

ಮಾರ್ಚ್ 23 ರಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯಲಿದ್ದು, 26 ರಂದು ಗಣಿತ, 28 ರಂದು ಇಂಗ್ಲೀಷ್, 29 ರಂದು ವಿಜ್ಞಾನ, ಏಪ್ರಿಲ್ 2 ರಂದು ಹಿಂದಿ ಅಥವಾ ತೃತೀಯ ಭಾಷೆ ಹಾಗೂ ಎಪ್ರಿಲ್ 4 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

Also Read  ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ದುರುಪಯೋಗ ➤ ಸೂಕ್ತ ಕ್ರಮದ ಎಚ್ಚರಿಕೆ

ಎಸೆಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಅಂತರ್ಜಾಲದ ಮೂಲಕ ಪ್ರೌಢ ಶಿಕ್ಷಣ ಮಂಡಳಿ ಪ್ರಕಟಿಸಿದ್ದು, ಪರೀಕ್ಷಾ ದಿನಾಂಕ ಸಂಬಂಧದ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಒಂದು ತಿಂಗಳ ಒಳಗಾಗಿ ತಿಳಿಸುವಂತೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ತಿಳಿಸಿದೆ.

error: Content is protected !!
Scroll to Top