(ನ್ಯೂಸ್ ಕಡಬ) newskadaba,ಚಿಕ್ಕಬಳ್ಳಾಪುರ ಜೂ.23: ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡುತ್ತಿದ್ದು, ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮೇಲೆ ಕೋವಿಡ್ ಲಸಿಕೆ ನೀಡಿ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು. ಶಾಲಾ-ಕಾಲೇಜುಗಳ ಆರಂಭದ ಬಗ್ಗೆ ಜನರಲ್ಲಿ ಯಾವುದೇ ಗೊಂದಲ ಬೇಡ. ಲಸಿಕೆ ನೀಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಲಸಿಕ ಪಡೆದು ಕೋವಿಡ್ ವೈರಾಣು ವಿರುದ್ಧ ಸರ್ಕಾರ ಮಾಡುತ್ತಿರುವ ಹೋರಾಟದಲ್ಲಿ ಕೈ ಜೋಡಿಸಬೇಕು. ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ಕಾಲೇಜುಗಳ ಆರಂಭಕ್ಕೂ ಮೊದಲೇ 18 ವರ್ಷ ತುಂಬಿದ ಎಲ್ಲರಿಗೂ ಲಸಿಕೆ ನೀಡಲಾಗುವುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ತಿಳಿಸಿದರು.